ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿತಿ ಚಿಂತಾಜನಕ: ಆಸ್ಪತ್ರೆ ವೈದ್ಯರ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ವರದಿ ಮಾಡಿರುವ ಎಎನ್‌ ಐ ಸುದ್ದಿ ಸಂಸ್ಥೆ, ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ ಆರೋಗ್ಯ ಕ್ಷೀಣಿಸುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್‌ ಸಹಾಯದಲ್ಲಿ ಇರಿಸಲಾಗಿದೆ ಎಂದು ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ, ಪ್ರತೀತ್‌ ಸಮದಾನಿ ತಿಳಿಸಿದ್ದಾರೆ.
92 ವರ್ಷದ ಗಾಯಕಿಗೆ ಕೋವಿಡ್‌ ಸೋಂಕು ಪತ್ತೆಯಾದ ಬಳಿಕ ಮುಂಬೈ ನ ಬ್ರೀಷ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!