ಗಾಯಕಿ ಲತಾ ಮಂಗೇಶ್ಕರ್​ ಅವರ ಆರೋಗ್ಯ ಸ್ಥಿತಿ ಸ್ಥಿರ: ಗೊಂದಲಗಳಿಗೆ ತೆರೆ ಎಳೆದ ವೈದ್ಯರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ ಕೆಲ ವಾರಗಳಿಂದ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಗಾಯಕಿ ಲತಾ ಮಂಗೇಶ್ಕರ್​ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಲತಾ ಮಂಗೇಶ್ಕರ್​ ಅವರ ಆರೋಗ್ಯದ ಸ್ಥಿತಿ ಗಂಭೀರ ಎಂಬ ಸುದ್ದಿ ಹರಿದಾಡಲು ಶುರುವಾಗುತ್ತಿದ್ದಂತೆ ಮಾಹಿತಿ ಹಂಚಿಕೊಂಡಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ವೈದ್ಯರು, ಗೊಂದಲಗಳಿಗೆ ಕಿವಿಗೊಡಬೇಡಿ, ಅವರ ಆರೋಗ್ಯದಲ್ಲಿ ಸ್ಥಿರತೆ ಇದ್ದು, ಐಸಿಯುನಲ್ಲೇ ಚಿಕಿತ್ಸೆ ಮುಂದುವರೆದಿದೆ.ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕೋವಿಡ್​ ದೃಢಪಟ್ಟ ಹಿನ್ನೆಲೆ ಲತಾ ಮಂಗೇಶ್ಕರ್​ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!