ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಮತ್ತು ನ್ಯುಮೋನಿಯಾದಿಂದಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ವೈದ್ಯ ಪ್ರತೀತ್ ಸಮಾಧಾನಿ, ಲತಾ ಮಂಗೇಶ್ಕರ್ ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅವರನ್ನು ಇನ್ನೂ ಕೆಲವು ದಿನಗಳವರೆಗೆ ತೀವ್ರ ನಿಗಾ ಘಟಕದಲ್ಲಿ ಇರಿಸಬೇಗುತ್ತದೆ ಎಂದರು.
ಇನ್ನು ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿದೆ. ಲತಾ ಮಂಗೇಶ್ಕರ್ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವಂತೆ ಅವರ ಅಭಿಮಾನಿಗಳಿಗೆ ಮನವಿ ಮಾಡಿದರು.
ಜನವರಿ 10 ರಂದು ಲತಾ ಮಂಗೇಶ್ಕರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿತು. ಅವರನ್ನು ಬೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.