ಗಾಯಕಿ ಲತಾ ಮಂಗೇಶ್ಕರ್‌ ಹೆಲ್ತ್‌ ಅಪ್‌ಡೇಟ್:‌ ಕುಟುಂಬದವರಿಗೂ ನೋಡಲು ಅನುಮತಿ ಇಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ ಅವರಿಗೆ ಕೊರೋನಾ ತಗುಲಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ಭೇಟಿ ಮಾಡಲು ಕುಟುಂಬದವರಿಗೂ ಅನುಮತಿ ನೀಡಿಲ್ಲ ಎಂದು ತಿಳಿದು ಬಂದಿದೆ.
ಈ ಬಗ್ಗೆ ಮಾಧ್ಯಮದೊಂದಿದೆ ಮಾತನಾಡಿದ ಸೋದರಿ ಉಶಾ ಮಂಗೇಶ್ಕರ್‌, ದೀದಿಯ ಆರೋಗ್ಯ ಸ್ಥಿರವಾಗಿದ್ದಾರೆ. ಆಕೆಯ ಆರೋಗ್ಯ ಚೇತರಿಸಿಕೊಳ್ಳಲು ದೇವರಲ್ಲಿ ಪ್ರಾರ್ಥಿಸಿದ ದೇಶದ ಎಲ್ಲಾ ಜನರಿಗೂ ಧನ್ಯವಾದ ಎಂದರು.
ಆದರೆ ಕೋವಿಡ್‌ ಕಾರಣದಿಂದ ಅವರನ್ನು ನೋಡಲು ಯಾರಿಗೂ ಅನುಮತಿ ನೀಡಿಲ್ಲ. ಅವರಿಗೆ 90ಕ್ಕಿಂತ ಹೆಚ್ಚು ವಯಸ್ಸಾಗಿರುವುದರಿಂದ  ಇನ್ನಷ್ಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಇರಬೇಕಾಗಬಹುದು. ಉತ್ತಮ ವೈದ್ಯರ ತಂಡ ಹಾಗೂ ನರ್ಸ್‌ ಗಳು ಲತಾ ಅವರ ಆರೋಗ್ಯ ನೋಡಿಕೊಳ್ಳುತ್ತಿದೆ. ಅವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!