ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೂಟರ್ ಸಂತೋಷ್ ಜಾಧವ್ ನನ್ನು ಪುಣೆ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ. ಆತನ ಸಹಚರನನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.
2021ರಲ್ಲಿ ಪುಣೆಯ ಮಂಚರ್‌ ಠಾಣೆಯಲ್ಲಿ ದಾಖಲಾದ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಜಾಧವ್‌ ಗೆ ತೀವ್ರ ಶೋಧ ನಡೆಸುತ್ತಿದ್ದರು. ಆತನ ಪತ್ತೆಗಾಗಿ ಪುಣೆ ಗ್ರಾಮಾಂತರ ಕಳೆದ ವಾರ ಗುಜರಾತ್ ಮತ್ತು ರಾಜಸ್ಥಾನಕ್ಕೆ ಹಲವು ತಂಡಗಳನ್ನು ಕಳುಹಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
ಪುಣೆ ಗ್ರಾಮಾಂತರ ಪೊಲೀಸರು ಮೂಸೇ ವಾಲ ಹತ್ಯೆ ಪ್ರಕರಣದ ಆರೋಪಿಯಾದ ಬಿಷ್ಣೋಯ್ ಗ್ಯಾಂಗ್ ಸದಸ್ಯ ಮಹಾಕಾಲ್ ನನ್ನು ಕಳೆದ ವಾರ ಬಂಧಿಸಿದ್ದರು. ಮೂಸ್ ವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ವಿಶೇಷ ಘಟಕ ಮತ್ತು ಪಂಜಾಬ್ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಚಿತ್ರಕಥೆಗಾರ ಸಲೀಂ ಖಾನ್ ಮತ್ತು ಚಿತ್ರನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಮಹಾಕಾಲ್ ನನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!