ಬಹುಕಾಲದ ಗೆಳೆಯನ ಜೊತೆ ಹಸೆಮಣೆ ಏರಿದ ಗಾಯಕಿ ಪಲಕ್ ಮುಚ್ಚಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಾಯಕಿ ಪಲಕ್ ಮುಚ್ಚಲ್ ಬಹುಕಾಲದ ಗೆಳೆಯನ ಜೊತೆ ಹಸೆಮಣೆ ಏರಿದ್ದಾರೆ. ಈ ಜೋಡಿಯ ಮದುವೆ ಮತ್ತು ರಿಸೆಪ್ಷನ್‌ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಕನ್ನಡ, ತಮಿಳು, ತೆಲಗು, ಹಿಂದಿ ಸೇರಿದಂತೆ ಸಾಕಷ್ಟು ಭಾಷೆಗಳಲ್ಲಿ ಹಾಡಿ ಸೈ ಎನಿಸಿಕೊಂಡಿರುವ ಪಲಕ್ ಮಿಥುನ್ ಶರ್ಮಾ ಜೊತೆ ಗುರುಹಿರಿಯರ ಸಮ್ಮುಖದಲ್ಲಿ (ನ.6)ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಪಲಕ್ ಮತ್ತು ಮಿಥುನ್ ಸಾಕಷ್ಟು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಇದೀಗ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ದಾಂಪತ್ಯ ಕಾಲಿಟ್ಟಿದ್ದಾರೆ. ಮಿಥುನ್ ಶರ್ಮಾ ಕೂಡ ಬಾಲಿವುಡ್‌ನಲ್ಲಿ ತಮ್ಮ ಸಂಗೀತ ನಿರ್ದೇಶನದ ಮೂಲಕ ಗುರುತಿಸಿಕೊಂಡಿದ್ದಾರೆ. ಇನ್ನೂ ಈ ಜೋಡಿಯ ಮದುವೆಗೆ ಅನೇಕ ಸೆಲೆಬ್ರಿಟಿಗಳು ಸಾಕ್ಷಿಯಾಗಿದ್ದಾರೆ.

ಇನ್ನೂ ಅನೇಕ ಕಡೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡಿರುವ ಪಲಕ್, ಬಂದ ಹಣದಲ್ಲಿ ಮಕ್ಕಳ ಶಸ್ತ್ರ ಚಿಕಿತ್ಸೆಗೆ ಸಹಾಯ ಮಾಡಿದ್ದಾರೆ. 2200ಕ್ಕೂ ಹೆಚ್ಚು ಮಕ್ಕಳಿಗೆ ಜೀವ ಉಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!