Friday, November 28, 2025

ಸಂಗೀತ ನಿರ್ದೇಶಕ ರಘು ದೀಕ್ಷಿತ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ವಾರಿಜಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಗೀತ ನಿರ್ದೇಶಕ ರಘು ದೀಕ್ಷಿತ್ ಅವರು ಗಾಯಕಿ ವಾರಿಜಶ್ರೀ ವೇಣುಗೋಪಾಲ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ.

ಸೋಶಿಯಲ್ ಮೀಡಿಯಾದಲ್ಲಿ ಫೋಟೊಗಳು ವೈರಲ್‌ ಆಗಿದ್ದು, ನವಜೋಡಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ರಘು ದೀಕ್ಷಿತ್ ಮತ್ತು ವಾರಿಜಶ್ರೀ ವೇಣುಗೋಪಾಲ್ ಅವರು ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ವಾರಿಜಶ್ರೀ ಅವರು ಗಾಯಕಿಯಾಗಿ, ಕೊಳಲು ವಾದಕಿಯಾಗಿ ಖ್ಯಾತಿ ಗಳಿಸಿದ್ದಾರೆ.
ಪರಿಚಯದಿಂದ ಪ್ರೀತಿ ಬೆಳೆದು, ಕುಟುಂಬದ ಒಪ್ಪಿಗೆ ಪಡೆದು ಅವರಿಬ್ಬರು ದಾಂಪತ್ಯ ಜೀವನ ಆರಂಭಿಸಿದ್ದಾರೆ.

50 ವರ್ಷ ವಯಸ್ಸಿನ ರಘು ದೀಕ್ಷಿತ್‌ ಈ ಹಿಂದೆ ಖ್ಯಾತ ಡ್ಯಾನ್ಸರ್‌ ಮಯೂರಿ ಉಪಾಧ್ಯ ಅವರನ್ನು 2005ರಲ್ಲಿ ವಿವಾಹವಾಗಿದ್ದರು. ಬಳಿಕ ಇಬ್ಬರ ನಡುವೆ ವೈಮನಸ್ಸು ಮೂಡಿ 2019ರಲ್ಲಿ ಡಿವೋರ್ಸ್‌ ಪಡೆದು ಬೇರ್ಪಟ್ಟರು. ಇದೀಗ ಸಂಗೀತ ಕುಟುಂಬ ಹಿನ್ನೆಲೆಯಿಂದ ಬಂದ ಗಾಯಕಿ ವಾರಿಜಶ್ರೀ ಅವರನ್ನು ವಿವಾಹವಾಗಿದ್ದಾರೆ.

error: Content is protected !!