Thursday, July 7, 2022

Latest Posts

ಹಿರಿಯ ಗಾಯಕಿ, ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್‌ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೋವಿಡ್‌ ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ, ಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್‌ (92) ಅವರು ವಿಧಿವಶರಾಗಿದ್ದಾರೆ.
ಮುಂಬೈ ನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಜ.11ರಂದು ಆಸ್ಪತ್ರೆಗೆ ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಭಾನುವಾರ ಬೆಳಗ್ಗೆ 8:30ಕ್ಕೆ ನಿಧನರಾಗಿದ್ದಾರೆ. ನಿನ್ನೆಯಿಂದ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಪುನಃ ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅತಾ ಮಂಗೇಶ್ಕರ್‌ ಅವರ ನಿಧನದ ಬಗ್ಗೆ ಸಂತಾಪ ಸೂಚಿಸಿದ್ದಾರೆ. ʼಭಾರತ ರತ್ನ ಪುರಸ್ಕೃತೆ ಲತಾ ಮಂಗೇಶ್ಕರ್‌ ಅವರ ನಿಧನದಿಂದ ದೇಶದ ಸಂಗೀತ ಪರಂಪರೆಯ ಹಿರಿಯ ಕೊಂಡಿ ಕಳಚಿದಂತಾಗಿದೆ. ಸಂಗೀತ ಲೋಕದಲ್ಲಿ 30 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹೆಗ್ಗಳಿಕೆ ಲತಾ ಅವರದ್ದು. ಲತಾ ದೀದಿ ಅವರು ತುಂಬಾ ಶಾಂತ ಸ್ವಭಾವದವರಾಗಿದ್ದು, ಪ್ರತಿಭೆಯಲ್ಲಿ ಶ್ರೀಮಂತರು.ʼ ಎಂದು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss