Monday, December 1, 2025

ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೋಮವಾರ ತಿಳಿಸಿದ್ದಾರೆ.

ಗೋರಖ್‌ಪುರದಲ್ಲಿ ನಡೆದ ‘ಏಕತಾ ಯಾತ್ರೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕ್ರಮವು ಭಾರತ ಮಾತೆ ಮತ್ತು ಮಾತೃಭೂಮಿಯ ಬಗ್ಗೆ ನಾಗರಿಕರಲ್ಲಿ ಗೌರವ ಮತ್ತು ಹೆಮ್ಮೆಯ ಭಾವನೆಗಳನ್ನು ಪ್ರೇರೇಪಿಸುತ್ತದೆ ಎಂದು ಹೇಳಿದರು.

‘ವಂದೇ ಮಾತರಂ ಗೀತೆಯ ಬಗ್ಗೆ ಗೌರವ ಭಾವನೆ ಇರಬೇಕು. ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಅದರ ಹಾಡುವಿಕೆಯನ್ನು ಕಡ್ಡಾಯಗೊಳಿಸುತ್ತೇವೆ’ ಎಂದರು.

error: Content is protected !!