ಒಂದೇ ದಿನದಲ್ಲಿ ಸಾವಿರ ದಾಟಿದ ಕೋವಿಡ್‌ ಪ್ರಕರಣಗಳು: 4 ತಿಂಗಳ ನಂತರ ಇದೇ ಮೊದಲ ಬಾರಿಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಆತಂಕಕಾರಿಯಾಗಿ ಹೆಚ್ಚುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 1,071 ಪ್ರಕರಣಗಳು ವರದಿಯಾಗಿವೆ. ನಾಲ್ಕು ತಿಂಗಳಲ್ಲಿ ಒಂದೇ ದಿನದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ಇದೇ ಮೊದಲು. 129 ದಿನಗಳ ನಂತರ ದೇಶದಲ್ಲಿ ಈ ಮಟ್ಟದ ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 5,915 ಆಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಮೂರು ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ರಾಜಸ್ಥಾನ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತಲಾ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಶೇಕಡಾವಾರು 0.1 ಆಗಿದೆ. ಕೋವಿಡ್ ಚೇತರಿಕೆ ಪ್ರಮಾಣ 98.8% ಆಗಿದ್ದರೆ ಸಾವಿನ ಪ್ರಮಾಣ 1.19% ಆಗಿದೆ. ದೇಶದಲ್ಲಿ ಇದುವರೆಗೆ 220.65 ಕೋಟಿ ಕೋವಿಡ್ ಲಸಿಕೆ ಪೂರ್ಣಗೊಂಡಿದೆ.

ಇತ್ತೀಚೆಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ಆತಂಕಕಾರಿಯಾಗಿದೆ. ನಾಲ್ಕು ತಿಂಗಳ ನಂತರ ಮತ್ತೆ ಪ್ರಕರಣಗಳು ವಿಜೃಂಭಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಎಚ್ಚೆತ್ತುಕೊಂಡಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರಗಳನ್ನು ಬರೆದಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರಬೇಕು ಎಂದು ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!