ಶಾಲೆ, ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ಬಳಸುವಂತಿಲ್ಲ: ಬಿಬಿಎಂಪಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲೆ, ಕಾಲೇಜು, ದೇವಾಲಯಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್‌ ಬಳಸುವಂತಿಲ್ಲ. ಅಲ್ಲದೆ ಈ ನಿಯಮ ಜಾರಿಯಾಗದಿದ್ದರೆ ದಂಡ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಖಡಕ್‌ ಎಚ್ಚರಿಕೆ ನೀಡಿದೆ.

ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಈಗಾಗಲೆ ಆದೇಶ ಹೊರಡಿಸಲಾಗಿದ್ದು, ಪಾಲಿಕೆಯ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳು, ದೇವಾಲಯಗಳ ಆವರಣದೊಳಗೆ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಫಲಕ ಅಳವಡಿಸಲು ಸೂಚಿಸಲಾಗಿದೆ.

ಏಕಬಳಕೆ ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಅಥವಾ ಕಾಗದದಿಂದ ತಯಾರಾದ ವಸ್ತುಗಳನ್ನು ಬಳಸಬೇಕು. ಈ ನಿಯಮ ಪಾಲಿಸದಿದ್ದರೆ ದಂಡ ವಿಧಿಸಲಾಗುವುದು ಎಂದು ಹೇಳಿದೆ.

ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಷೇಧ ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದು ಬಿಬಿಎಂಪಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ಜಂಟಿ ನಿರ್ದೇಶಕಿ ಪ್ರತಿಭಾ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!