ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ಅವ್ಯವಸ್ಥೆ ಆಗಿದ್ದು, ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.
ಎಕ್ಸ್ (X) ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟ್ ಹಾಕಿದೆ. ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.
ಟ್ವೀಟ್‌ನಲ್ಲಿ ಏನಿದೆ?
ಮಾನ್ಯ ಹೆಚ್‌ಡಿ ದೇವೇಗೌಡ ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರ್ಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ‍್ಯಾಂಡ್ ಬೆಂಗಳೂರು!! ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್‌ನಲ್ಲಿ ಬ್ಯುಸಿಯಾಗಿದ್ದಾರೆ!! ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ಲೇವಡಿ ಮಾಡಿದೆ.