ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 61ನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರದ ಸೂಪರ್ ಸಂಡೇ ವಿತ್ ಬಾದ್ಷಾ ಸುದೀಪನ ಕಾರ್ಯಕ್ರಮದಲ್ಲಿ ಶೋಭಾ ಶೆಟ್ಟಿ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು ನಿರ್ಧಾರ ಮಾಡಿಬಿಟ್ಟಿದ್ದಾರೆ.
ನನಗೆ ಬಿಗ್ ಬಾಸ್ ಶೋ ಕಂಟಿನ್ಯೂ ಮಾಡೋಕೆ ಆಗಲ್ಲ ಎಂದು ಸುದೀಪ್ ಮುಂದೆ ನಟಿ ಕಣ್ಣೀರಿಟ್ಟಿದ್ದಾರೆ.
ಬಿಗ್ಬಾಸ್ಗೆ ಶಾಕಿಂಗ್ ರೀತಿಯಲ್ಲಿ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಮೊದಲ ದಿನವೇ ಸ್ಪರ್ಧಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ್ದರು. ಅದರಲ್ಲೂ ಬಿಗ್ಬಾಸ್ ಕೊಟ್ಟ ಟಾಸ್ಕ್ ಆಡುವಾಗ ಕೊನೆಯ ಕ್ಷಣದಲ್ಲಿ ಪ್ರಬಲ ಪೈಪೋಟಿ ನೀಡಿದ್ದರು. ಇದೇ ಟಾಸ್ಕ್ ಆಡುವಾಗ ಆಯಾ ತಪ್ಪಿ ಕೆಳಗೆ ಬಿದ್ದಿದ್ದರುನಂತರದ ಟಾಸ್ಕ್ನಲ್ಲಿ ಕತ್ತು ನೋವು ಮಾಡಿಕೊಂಡಿದ್ದರು. ಇದಾದ ಬಳಿಕ ಅವರ ಆರೋಗ್ಯ ಸಮಸ್ಯೆಗಳು ಕೂಡ ಕಾಣಿಸಿಕೊಂಡಿದ್ದವು. ಆದರೆ ಸೂಪರ್ ಸಂಡೇ ವಿತ್ ಬಾದ್ಷಾ ಸುದೀಪನ ಕಾರ್ಯಕ್ರಮದಲ್ಲಿ ಏಕಾಏಕಿ ಸರ್ ನನಗೆ ಇಲ್ಲಿ ಇರೋದಕ್ಕೆ ಆಗುತ್ತಿಲ್ಲ ಅಂತ ಕಣ್ಣೀರು ಹಾಕಿದ್ದಾರೆ.
ರಿಲೀಸ್ ಆದ ಪ್ರೋಮೋದಲ್ಲಿ ಶೋಭಾ ಅವರೇ ನೀವು ಸೇಫ್ ಎಂದು ಕಿಚ್ಚ ಹೇಳಿದ್ದಾರೆ. ಆದರೆ ಇದಕ್ಕೆ ಅಳುತ್ತಲೇ ಉತ್ತರ ಕೊಟ್ಟ ಶೋಭಾ ಶೆಟ್ಟಿ, ಸರ್ ನನಗೆ ಎಲ್ಲೋ ಒಂದು ಕಡೆ ಇರೋಕೆ ಆಗುತ್ತಿಲ್ಲ ಅನಿಸುತ್ತಿದೆ. ಹೀಗೆ ಹೇಳುತ್ತಿದ್ದಂತೆ ಸ್ಪರ್ಧಿಗೆಲ್ಲಾ ಗಾಬರಿಯಿಂದ ಶೋಭಾ ಅವರನ್ನು ನೋಡಿದ್ದಾರೆ. ಮತ್ತೆ ಮಾತನಾಡಿದ ಕಿಚ್ಚ, ಅರ್ಥ ಮಾಡಿಕೊಳ್ಳಿ, ಯಾಕೆ ನೀವು ಒಳಗೆ ಹೋಗಿದ್ರಿ? ನಿಮ್ಮನ್ನು ಸೇಫ್ ಮಾಡಿದರಲ್ಲ, ಅವರಿಗೆ ಈ ತರ ಉತ್ತರ ಕೊಡೋಕೆ ಆಗಲ್ಲ. ಹೊರಗಡೆ ಹೋಗಬೇಕಾ ಎಂದು ಕೈ ತೋರಿಸುತ್ತ ದೊಡ್ಡ ಧ್ವನಿಯಲ್ಲಿ ಕಿಚ್ಚ ಸುದೀಪ್ ಶೋಭಾಗೆ ಪ್ರಶ್ನಿಸಿದ್ದಾರೆ. ನಿನಗಾಗಿ ಡೋರ್ ಓಪನ್ ಇದೆ ಎಂದು ಹೇಳಿದ್ದಾರೆ.
ಸದ್ಯ ಇಂದಿನ ಸಂಚಿಕೆಯಲ್ಲಿ ಶೋಭಾ ಶೆಟ್ಟಿ ಬಿಗ್ಬಾಸ್ ಮನೆಯಿಂದ ಆಚೆ ಬರುತ್ತಾರಾ? ಅಥವಾ ನಾಮಿನೇಷನ್ ಜಾಗದಲ್ಲಿರೋ, ಗೌತಮಿ, ಐಶ್ವರ್ಯ, ಭವ್ಯಾ ಗೌಡ, ಶಿಶಿರ್ ಹಾಗೂ ಚೈತ್ರಾ ಕುಂದಾಪುರ ಇವರಲ್ಲಿ ಯಾರಾದರೂ ಹೋಗುತ್ತಾರಾ ಅಂತ ಕಾದು ನೋಡಬೇಕಿದೆ.