February 27, 2026
Friday, February 27, 2026
spot_img

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್: ಆಕ್ಷೇಪಣೆ ಅರ್ಜಿ ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ 50 ಲಕ್ಷ ದೂರುಗಳು ಸಲ್ಲಿಕೆಯಾಗಿದ್ದು, ಜೊತೆಗೆ ಆಕ್ಷೇಪಣೆ ಅರ್ಜಿಗಳು ಸಲ್ಲಿಸಲಾಗಿದ್ದು,ಆದರೆ ಸುಪ್ರೀಂ ಕೋರ್ಟ್ ಪುರಸ್ಕರಿಸಲು ನಿರಾಕರಿಸಿದೆ.

ಆಕ್ಷೇಪಗಳ ವಿಚಾರಣೆಗಾಗಿ ನಿಯೋಜಿಸಲಾದ ಸಿವಿಲ್ ನ್ಯಾಯಾಧೀಶರು ಯಾರಿಂದಲೂ ಪ್ರಭಾವಕ್ಕೆ ಒಳಗಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಹಾಜರಾಗಿದ್ದ ಕಪಿಲ್ ಸಿಬಲ್, ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ ಕಲ್ಕತ್ತ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಎಸ್‌ಐಆರ್ ಆಕ್ಷೇಪಣೆ ವಿಚಾರಿಸಲು ನ್ಯಾಯಾಧೀಶರನ್ನು ನಿಯೋಜಿಸಿದ್ದಾರೆ. ಆದರೆ ಹಿಂಬಾಗಿಲಿನಲ್ಲಿ ನ್ಯಾಯಾಂಗ ಅಧಿಕಾರಿಗಳಿಗೆ ಚುನಾವಣಾ ಆಯೋಗವು ತರಬೇತಿಯ ಮಾದರಿಯನ್ನು ಬಿಡುಗಡೆಗೊಳಿಸಿದೆ’ ಎಂದು ವಾದಿಸಿದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಾಂಗ ಅಧಿಕಾರಿಗಳೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯಾರಿಂದಲೂ ಪ್ರಭಾವಿತರಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಯಾವುದೇ ರಾಜ್ಯ ಸರ್ಕಾರವಾಗಲೀ, ಚುನಾವಣಾ ಆಯೋಗವಾಗಲೀ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮೀರಿ ನಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !