Wednesday, December 10, 2025

ಕಾಂಗ್ರೆಸ್ ನಲ್ಲೇ ಮೊದಲು SIR ಅಗತ್ಯ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಚಾಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲೇ SIR (ವಿಶೇಷ ತೀವ್ರ ಪರಿಷ್ಕರಣೆ) ಅಗತ್ಯತೆ ಹೆಚ್ಚಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಸಂಸತ್ ಚಳಿಗಾಲದ ಅಧಿವೇಶನದ ಈ ಸಂದರ್ಭದಲ್ಲಿ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಚುನಾವಣಾ ಆಯೋಗಕ್ಕಿಂತ ಕಾಂಗ್ರೆಸ್ ಪಕ್ಷದಲ್ಲೇ SIR ತುಂಬಾ ಅವಶ್ಯಕತೆ ಇದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ರಾಜೀವ್ ಗಾಂಧಿ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹೀಗೆ ಬರೀ ನಕಲಿ ಗಾಂಧಿಗಳದ್ದೇ ಅಧಿಕಾರ ಮುಂಚೂಣಿಯಲ್ಲಿದೆ. ಹಾಗಾಗಿ ಕಾಂಗ್ರೆಸ್ ಪಕ್ಷದೊಳಗೇ ಮೊದಲು SIR ನಡೆಯಬೇಕಿದೆ ಎಂದು ಜೋಶಿ ಅಭಿಪ್ರಾಯಿಸಿದ್ದಾರೆ.

error: Content is protected !!