September 7, 2026
Monday, September 7, 2026
spot_img

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಕ್ಷಮೆ ಕೋರಿದ SIR ಅಧಿಕಾರಿ: ಅಷ್ಟಕ್ಕೂ ಆಗಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೈಗೆಟುಕುವ ಶಿಕ್ಷಣಕ್ಕೆ ಶ್ರಮಿಸಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

2002ರ ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹಾಜಬ್ಬ ಅವರ ಹೆಸರನ್ನು ‘ಹಾಜಬ್ಬ’ ಎಂದು ಮಾತ್ರ ದಾಖಲಿಸಲಾಗಿತ್ತು ಎನ್ನಲಾಗಿದೆ. ಆದರೆ ಪ್ರಸ್ತುತ ಅವರ ರೇಷನ್ ಕಾರ್ಡ್, ಆಧಾರ್, ಪಾಸ್‌ಪೋರ್ಟ್ ಹಾಗೂ ಮತದಾರರ ಗುರುತಿನ ಚೀಟಿಯಲ್ಲಿ ‘ಹರೇಕಳ ಹಾಜಬ್ಬ’ ಎಂದು ಹೆಸರು ದಾಖಲಾಗಿದೆ.

ಇದನ್ನೂ ಓದಿ:

ಹೆಸರಿನಲ್ಲಿರುವ ಈ ವ್ಯತ್ಯಾಸದ ಹಿನ್ನೆಲೆಯಲ್ಲಿ 2002ರ ಮತದಾರರ ಪಟ್ಟಿಯಲ್ಲಿರುವ ವ್ಯಕ್ತಿ ಹಾಗೂ ಪ್ರಸ್ತುತ ದಾಖಲೆಗಳಲ್ಲಿರುವ ಮತದಾರರು ಒಂದೇ ವ್ಯಕ್ತಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 11ರಂದು ಅಗತ್ಯ ದಾಖಲೆಗಳೊಂದಿಗೆ ಪರಿಶೀಲನೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನೋಟಿಸ್ ನೀಡಿದ ಬಳಿಕ ಎಚ್ಚೆತ್ತ ಅಧಿಕಾರಿಗಳು ಹಾಜಬ್ಬ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗಾಗಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ನೋಟಿಸ್ ನೀಡಿದ್ದಕ್ಕೆ ಹಾಜಬ್ಬ ಅವರ ಬಳಿ ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !