ಸರ್… ಪ್ಯಾಂಟ್‌ ಲೂಸ್‌ ಆಗಿದೆ, ಬೆಲ್ಟ್‌ ಬಳಸಲು ಅವಕಾಶ ಮಾಡಿಕೊಡಿ: ಕೋರ್ಟ್ ಮುಂದೆ ಕೇಜ್ರಿವಾಲ್‌ ಮನವಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಿಹಾರ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರೀಗ ಸಿಬಿಐ ಕಸ್ಟಡಿಯಲ್ಲಿದ್ದಾರೆ. ಮೂರು ದಿನ ಸಿಬಿಐ ಕಸ್ಟಡಿಗೆ ವಹಿಸಿ ಬುಧವಾರ (ಜೂನ್‌ 26) ದೆಹಲಿಯ ರೋಸ್‌ ಅವೆನ್ಯೂ ಕೋರ್ಟ್‌ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅರವಿಂದ್‌ ಕೇಜ್ರಿವಾಲ್‌ ಅವರು ಕೋರ್ಟ್‌ಗೆ ವಿಶೇಷ ಮನವಿ ಮಾಡಿದ್ದಾರೆ.

‘ತಿಹಾರ ಜೈಲಿಗೆ ಹೋಗುವಾಗ ಪ್ಯಾಂಟ್‌ ಹಿಡಿದುಕೊಂಡೇ ಹೋಗಬೇಕಾಗಿದೆ. ಹಾಗಾಗಿ, ನನಗೊಂದು ಬೆಲ್ಟ್‌ ಬಳಸಲು ಅವಕಾಶ ಮಾಡಿಕೊಡಿ’ಎಂದು ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಲಯವು ಅನುಮತಿ ನೀಡಿದೆ.

ಅರವಿಂದ್‌ ಕೇಜ್ರಿವಾಲ್‌ ಅವರು ಸಿಬಿಐ ಕಸ್ಟಡಿಯಲ್ಲಿರುವಾಗ ಮನೆಯಿಂದ ತರುವ ಊಟ ಮಾಡಬಹುದು, ವೈದ್ಯರು ಸೂಚಿಸಿದ ಮಾತ್ರೆಗಳನ್ನು ಸೇವಿಸಬಹುದು ಹಾಗೂ ಪ್ರತಿ ದಿನ ಅರ್ಧ ಗಂಟೆ ಪತ್ನಿಯನ್ನು ಮತ್ತು ಇನ್ನರ್ಧ ಗಂಟೆ ವಕೀಲರನ್ನು ಭೇಟಿಯಾಗಬಹುದು ಎಂದು ಅನುಮತಿ ನೀಡಿದೆ. ಹಾಗೆಯೇ, ಓದಲು ಭಗವದ್ಗೀತೆ, ಒಂದು ಬೆಲ್ಟ್‌ ಬಳಕೆ ಮಾಡಲು ಕೂಡ ರೋಸ್‌ ಅವೆನ್ಯೂ ಕೋರ್ಟ್‌ ಸಮ್ಮತಿ ಸೂಚಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಮನೆಯ ಊಟ ಸೇವಿಸಲು ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!