ಸರ್ ನಮಗೂ ಒಂದು ಗ್ಯಾರಂಟಿ ಕೊಡಿ ಪ್ಲೀಸ್.. ಬೇಡಿಕೆ ಕೇಳಿ ಡಿಕೆಶಿ ಏನಂದ್ರು ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಕ್ಕಳ ದಿನಾಚರಣೆ ಅಂಗವಾಗಿ ‘ನಮ್ಮ ಮಕ್ಕಳು ನಮ್ಮ ಭವಿಷ್ಯ’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರಿಗೆ ಶಾಲಾ ವಿದ್ಯಾರ್ಥಿಗಳು ಪ್ರಶ್ನೆಗಳು ಕೇಳಿದ್ದಾರೆ. ಅದರಲ್ಲೂ 7ನೇ ತರಗತಿ ವಿದ್ಯಾರ್ಥಿ ಚರಣ್ ಗ್ಯಾರಂಟಿ ಯೋಜನೆ ಬಗ್ಗೆ ಪ್ರಶ್ನೆ ಕೇಳಿದ್ದಾನೆ.

ನೀವು 5 ಗ್ಯಾರಂಟಿ ನೀಡಿದ್ದೀರಿ, ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದ್ದೀರಿ, ನಮ್ಮ ಅಮ್ಮ ಅಕ್ಕ ತಂಗಿಯರನ್ನು ಮಾತ್ರ ಊರಿಗೆ ಕರೆದುಕೊಂಡು ಹೋಗುತ್ತಾರೆ. ಗಂಡು ಮಕ್ಕಳಿಗಾಗಿ ಯಾವುದೇ ಯೋಜನೆ ಇಲ್ವಾ ಎಂದು ಪ್ರಶ್ನೆ ಕೇಳಿದ್ದಾನೆ.

ಇದಕ್ಕೆ ನಗುತ್ತಲೇ ಉತ್ತರಿಸಿದ ಡಿಸಿಎಂ. ನೀನು ಕೇಳಿರುವ ಪ್ರಶ್ನೆಗೆ ಸರ್ಕಾರದಲ್ಲಿ ಚರ್ಚಿಸಿ ಮುಂದೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!