ಸರ್, ಯಾರೋ ನನ್ನ ಫೋಟೊ ತಿರುಚಿದ್ದಾರೆ: ಮುಂಬೈ ಪೊಲೀಸರಿಗೆ ನಟ ರಣವೀರ್ ಸಿಂಗ್ ಹೇಳಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮ್ಯಾಗಜೀನ್ ಗಾಗಿ ಬೆತ್ತಲೆ ಫೋಟೊಶೂಟ್ ಮಾಡಿಸಿಕೊಂಡು ವಿವಾದ ಸೃಷ್ಟಿಸಿದ್ದ ಬಾಲಿವುಡ್ ನಟ ರಣವೀರ್ ಸಿಂಗ್, ತಮ್ಮ ಫೋಟೊಗಳನ್ನು ಯಾರೋ ತಿರುಚಿ ಬದಲಾವಣೆ ಮಾಡಿದ್ದಾರೆ ಎಂದು ಪೊಲೀಸರಿಗೆ ಸ್ಪಷ್ಟನೆ ನೀಡಿದ್ದಾರೆ.
ಈ ಪ್ರಕರಣದಲ್ಲಿ ಮುಂಬೈ ಪೊಲೀಸರು ಈಗಾಗಲೇ ಎಫ್​ಐಆರ್ ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ರಣವೀರ್ ಸಿಂಗ್ ತಮ್ಮ ಹೇಳಿಕೆಯನ್ನು ಪೊಲೀಸರ ಮುಂದೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಮುಂಬೈ ಪೊಲೀಸರಿಂದ ಪಡೆದ ಮಾಹಿತಿಯ ಪ್ರಕಾರ, ನಟ ತನ್ನ ಹೇಳಿಕೆಯಲ್ಲಿ- ತನ್ನ ಫೋಟೋಗಳಲ್ಲಿ ಒಂದನ್ನು ಯಾರೋ ಟ್ಯಾಂಪರ್ ಮಾಡಿದ್ದಾರೆ ಮತ್ತು ಮಾರ್ಫ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಜುಲೈ 26 ರಂದು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ರಣವೀರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ವರದಿಯ ಪ್ರಕಾರ, ನಟ ತನ್ನ ನಗ್ನ ಫೋಟೋಗಳಿಂದ ಮಹಿಳೆಯರ ಭಾವನೆಗಳನ್ನು ನೋಯಿಸಿದ್ದಾರೆ ಎಂದು ಆರೋಪಿಸಿ ಎನ್‌ಜಿಒ ಪದಾಧಿಕಾರಿಯೊಬ್ಬರು ನೀಡಿದ ದೂರನ್ನು ಸ್ವೀಕರಿಸಿದ ನಂತರ ಪ್ರಕರಣ ದಾಖಲಿಸಲಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಆಗಸ್ಟ್ 29 ರಂದು ಮುಂಬೈನ ಚೆಂಬೂರ್ ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ತನ್ನ ಹೇಳಿಕೆಯನ್ನು ದಾಖಲಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!