ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್ ನ ಅಹಮದಾಬಾದ್ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭೇಟಿ ನೀಡಿದರು.
ಈ ವೇಳೆ ಪ್ರದರ್ಶನದಲ್ಲಿ ವಿವಿಧ ರೋಬೋಟ್ ಸ್ಟಾಲ್‌ಗಳಲ್ಲಿ ಹಲವಾರು ರೋಬೋಟಿಕ್ ಕ್ರಿಯೆಗಳನ್ನು ವೀಕ್ಷಿಸಿದರು. ಪ್ರಧಾನಿಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಾಥ್ ನೀಡಿದರು.
ಪ್ರಧಾನಮಂತ್ರಿ ಅವರು ಆಸಕ್ತಿದಾಯಕ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ಮತ್ತು ಸಿಎಂಗೆ ರೋಬೋಟ್ ಚಹಾವನ್ನು ನೀಡುತ್ತಿದೆ. ನೈಸರ್ಗಿಕ ವಿಕೋಪಗಳು ಅಥವಾ ಅಗ್ನಿ ಅವಘಡಗಳ ಸಂದರ್ಭದಲ್ಲಿ ಮಾನವರಿಗೆ ರೋಬೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಪ್ರಧಾನಿ ಮೋದಿ ಅವರು ನೋಡಿದ್ದಾರೆಂದು ಕ್ಲಿಪ್ ತೋರಿಸಿದೆ. ರೋಬೋಟ್ ಇಂಜಿನಿಯರ್‌ಗಳು ಪಿಎಂ ಮೋದಿಯವರಿಗೆ ರೋಬೋಟ್‌ಗಳು ಹೇಗೆ ಜೀವನದ ವಿವಿಧ ಹಂತಗಳಲ್ಲಿ ಶಕ್ತರಾಗಿ ದೊಡ್ಡ ಪಾತ್ರವನ್ನು ವಹಿಸುತ್ತವೆ ಎಂಬುದನ್ನು ವಿವರಿಸಿದ್ದಾರೆ.
Exploring the endless possibilities of the future with Robotics! pic.twitter.com/DYtvZN9CLC
— Narendra Modi (@narendramodi) September 27, 2023
ರೊಬೊಟಿಕ್ಸ್ ನೊಂದಿಗೆ ಭವಿಷ್ಯದ ಅಂತ್ಯವಿಲ್ಲದ ಸಾಧ್ಯತೆಗಳನ್ನು ಅನ್ವೇಷಿಸುವುದು ಪಿಎಂ ಮೋದಿ ಬರೆದಿದ್ದಾರೆ.