ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಬ್ಯಾನರ್ ಗಲಾಟೆ ಸಂಬಂಧ ತನಗೆ ಜೀವ ಬೆದರಿಕೆ ಇದೆ ನನಗೆ ಝಡ್ ಶ್ರೇಣಿಯ (Z Category Security) ಭದ್ರತೆ ಕೊಡಿ ಎಂದು ಕೇಂದ್ರ ಹಾಗೂ ರಾಜ್ಯ ಗೃಹ ಸಚಿವರಿಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪತ್ರ ಬರೆದಿದ್ದಾರೆ.
ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಹೀಗಾಗಿ, ಝಡ್ ಶ್ರೇಣಿಯ ಭದ್ರತೆ ಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ , ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಗೃಹಮಂತ್ರಿ ಪರಮೇಶ್ವರ್, ಡಿಜಿ & ಐಜಿ ಸಲೀಂ ಅವರಿಗೂ ಪ್ರತ್ಯೇಕ ಪತ್ರ ಬರೆದಿದ್ದಾರೆ.
ಜ.1 ರಂದು ನನ್ನ ಹಾಗೂ ನನ್ನ ಕುಟುಂಬದ ಮೇಲೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಆತನ ಬೆಂಬಲಿಗರು ದಾಳಿ ನಡೆಸಿದ್ದರು. ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿ ಕಡೆಯಿಂದಲೇ ಪೆಟ್ರೋಲ್ ಬಾಂಬ್ ದಾಳಿ, ಬಂದೂಕಿನಿಂದ ಶೂಟ್ ಮಾಡಲು ಯತ್ನಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶಾಸಕ ಭರತ್ ರೆಡ್ಡಿ ಅವರಿಂದಲೇ ನನ್ನ, ನನ್ನ ಕುಟುಂಬಕ್ಕೆ ಆಪತ್ತು ಇದೆ. ಕೂಡಲೇ ಝಡ್ ಶ್ರೇಣಿಯ ಭದ್ರತೆ ಒದಗಿಸಿ, ಕುಟುಂಬಕ್ಕೆ ರಕ್ಷಣೆ ಕೊಡಿ ಎಂದು ಜನಾರ್ದನ ರೆಡ್ಡಿ ಮನವಿ ಮಾಡಿಕೊಂಡಿದ್ದಾರೆ.

