Wednesday, June 7, 2023

Latest Posts

ಸಿರಗುಪ್ಪ ಬಿಜೆಪಿ ಅಭ್ಯರ್ಥಿ ಎಂ.ಎಸ್.ಸೋಮಲಿಂಗಪ್ಪ ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ, ಬಳ್ಳಾರಿ (ಸಿರಗುಪ್ಪ):

ಎಸ್ಟಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ನಗರದ ವಿವಿಧ ದೇಗುಲಗಳಿಗೆ ತೆರಳಿ ವಿಶೇಷ ಪೂಜೆ, ಅರ್ಚನೆ ಸಲ್ಲಿಸಿದರು. ನಂತರ ಪಕ್ಷದ ಸಾವಿರಾರು ಬೆಂಬಲಿಗರು, ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ನಡೆಸಿದರು. ಪಕ್ಷದ ಅನೇಕ ಗಣ್ಯರು ಮೆರವಣಿಗೆಯಲ್ಲಿ ಸಾಕ್ಷಿಯಾದರು. ಕಮಲ ಬಾವುಟಗಳು‌ ಮೆರವಣಿಗೆಯಲ್ಲಿ ರಾರಾಜಿಸಿದವು. ನಗರದಲ್ಲಿ ಸ್ಥಾಪಿಸಿದ ವಿಧಾನಸಭೆ ಚುನಾವಣೆ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ನಗುಮುಖದಲ್ಲೇ ಕಚೇರಿ ಎದುರು ಜಮಾಯಿಸಿದ್ದ ಸಾವಿರಾರು ಜನರನ್ನು ಕೈಬೀಸಿ ನಮಸ್ಕರಿಸಿದರು.

ಗೆಲ್ಲುವ ವಿಶ್ವಾಸವಿದೆ:
ಕ್ಷೇತ್ರದ ಅಭಿವೃದ್ಧಿಗೆ ಕೋಟ್ಯಾಂತರ ರೂ.ಅನುದಾನ ತಂದಿರುವೆ, ಕ್ಷೇತ್ರದ ಜನರ ನಿರೀಕ್ಷೆಯಂತೆ ಅನೇಕ ಅಭಿವೃದ್ಧಿ ಕೆಲಸಗಳು, ನೀರಾವರಿ ಯೋಜನೆ ಸೇರಿದಂತೆ ಜನರ ನಿರೀಕ್ಷೆಯಂತೆ ಅವದಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿರುವೆ, ನನ್ನದೇ ಆದ ಇನ್ನೂ ಅಭಿವೃದ್ಧಿ ಕನಸುಗಳಿದ್ದು, ಎಲ್ಲವನ್ನೂ ಈಡೇರಿಸಲು ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಆರ್ಶಿವಾದಿಸಬೇಕು ಎಂದು ಮನವಿ ಮಾಡಿದರು. ನಮ್ಮ ಡಬಲ್ ಎಂಜಿನ್ ಸರ್ಕಾರ ಎಲ್ಲ ವರ್ಗದವರಿಗೂ ಅನುಕೂಲವಾಗುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಗೆ ಉತ್ತಮ ವಾತಾವರಣವಿದೆ, ಪ್ರಚಾರಕ್ಕೆ ತೆರಳಿದ ಎಲ್ಲ ಕಡೆಗಳಲ್ಲೂ ಕ್ಷೇತ್ರದ ಜನರಿಂದ ಅಭೂತಪೂರ್ವ ಬೆಂಬಲ, ಸ್ವಾಗತ ದೊರಡಯುತ್ತಿದ್ದು, ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್, ಕೆಆರ್ ಪಿಪಿ ಸೇರಿದಂತೆ ನಾನಾ ಪಕ್ಷಗಳ ನಾಯಕರ ಬಣ್ಣದ ಮಾತುಗಳಿಗೆ ಜನರು ಮರಳಾಗಬೇಡಿ, ಯಾವುದೇ ಆಮೀಷಗಳಿಗೆ ಒಳಗಾಗದೇ ಪ್ರತಿಯೋಬ್ಬರೂ ಬಿಜೆಪಿ ಬೆಂಬಲಿಸಿ ಆರ್ಶಿವಾದಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮಂಡಲ ಅಧ್ಯಕ್ಷ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!