ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ ಹಾಗೂ ಎಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಸಲ್ಲಿಸಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿರುವ ತನಿಖಾಧಿಕಾರಿ ಸುಮಾರಾಣಿ ಅವರು ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್‌ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಇತ್ತೀಚೆಗೆ ಮುಂದೂಡಿತ್ತು.