ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 1,632 ಪುಟಗಳ ದೂಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ (SIT) ಸೋಮವಾರ ಸಲ್ಲಿಸಿದೆ.
2ನೇ ಪ್ರಕರಣದಲ್ಲಿ 113 ಸಾಕ್ಷ್ಯಗಳನ್ನು ಸಂಗ್ರಹಿಸಿ, ಒಟ್ಟು 1,632 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.
ಈ ಪ್ರಕರಣದಲ್ಲಿ ಈವರೆಗೆ ನಡೆಸಿದ ತನಿಖೆಯಲ್ಲಿ ಸಂತ್ರಸ್ತ ಮಹಿಳೆಯ ಹೇಳಿಕೆ, ಸಾಂದರ್ಭಿಕ ಸಾಕ್ಷಿ ಮತ್ತು ಸಂತ್ರಸ್ತೆಯ ಅಶ್ಲೀಲ ವೀಡಿಯೋ ಕ್ಲಿಪ್‌ಗಳು, ಎಫ್‌ಎಸ್‌ಎಲ್ ವರದಿಗಳು ಹಾಗೂ ತಾಂತ್ರಿಕ ಸಾಕ್ಷ್ಯಾಧಾರ ಆಧಾರದ ಮೇಲೆ ಕಲಂ 376(2)(K), 376(2)(N), 354(A), 354(B), 354(C), 506, 201 ಐಪಿಸಿ ಮತ್ತು ಕಲಂ 66(E), ಐಟಿ ಆಕ್ಟ್-2008 ರೀತ್ಯಾ ಅಪರಾಧ ಎಸಗಿರುವುದು ದೃಢಪಟ್ಟಿದೆ ಎಂದು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ.