ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಮಹದೇವಪುರ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲಾ ಮತಗಳ್ಳತನ ಪ್ರಕರಣಗಳನ್ನ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿ ಆದೇಶ ಹೊರಡಿಸಿದೆ.
ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿ.ಕೆ ಸಿಂಗ್ ಅವರ ನೇತೃತ್ವದಲ್ಲಿ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ.
ಬಿಕೆ ಸಿಂಗ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿರಲಿದ್ದು, ಸಿಸಿಡಿ, ಸಿಐಡಿ ಅಧೀಕ್ಷಕ ಸೈದುಲು ಅದಾವತ್ ಹಾಗೂ ಎಸ್‌ಇಡಿ, ಸಿಐಡಿ ಅಧೀಕ್ಷಕಿ ಶುಭಾನ್ವಿತ ಅವರು ತಂಡದಲ್ಲಿ ಇರಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.