Monday, November 28, 2022

Latest Posts

‘ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳ ಮುಂದೆ ಧರಣಿ ಕೂರ‍್ತೀನಿ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್ಲರಿಗೂ ಕಡಿಮೆ ದರದಲ್ಲಿ ಆಹಾರ ನೀಡುತ್ತಿದ್ದ ಇಂದಿರಾ ಕ್ಯಾಂಟೀನ್ ಹಲವೆಡೆ ಮುಚ್ಚಿಗೋಗಿದೆ. ಈ ಕ್ರಮವನ್ನು ನಾನು ಒಪ್ಪುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳನ್ನು ಪುನಃ ತೆರೆದು ಉತ್ತಮ ಗುಣಮಟ್ಟದ ಊಟ-ತಿಂಡಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಶೀಘ್ರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಮುಚ್ಚಿರುವ ಇಂದಿರಾ ಕ್ಯಾಂಟೀನ್‌ಗಳ ಮುಂದೆ ಧರಣಿ ಕೂರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ ಬರುವ ಜನರ ಸಂಖ್ಯೆ ಕಡಿಮೆ ಎನ್ನೋದು ನೆಪ ಅಷ್ಟೆ, ಸರ್ಕಾರದ ಉದ್ದೇಶ ಬೇರೆಯೇ ಇದೆ. ಗುತ್ತಿಗೆದಾರರಿಗೆ ಹಣ ನೀಡಿಲ್ಲ ಎಂದಾದರೆ ಏನು ಮಾಡಲು ಸಾಧ್ಯ? ಬೆಂಗಳೂರಿನಲ್ಲಿ ಇರುವ 198 ಕ್ಯಾಂಟೀನ್‌ಗಳಲ್ಲಿ 40 ಕ್ಯಾಂಟೀನ್ ಮುಚ್ಚಿದ್ದಾರೆ.ಇನ್ನೂ ಒಂದೊಂದಾಗೆ ಕ್ಯಾಂಟೀನ್‌ಗಳನ್ನು ಮುಚ್ಚುತ್ತಿದ್ದಾರೆ. ಇದು ಸರಿಯಲ್ಲ. ಗುತ್ತಿಗೆ ನವೀಕರಣಕ್ಕೆ ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!