ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಡೆದ ಎರಡು ಪ್ರಮುಖ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು. ಸಿಎಂಗೂ ಎಸ್ಐಟಿ ನೋಟಿಸ್ ನೀಡಿ ತನಿಖೆ ನಡೆಸಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೇ 187 ಕೋಟಿ ರೂಪಾಯಿಯಷ್ಟು ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ ಎಂದು ಜೋಶಿ ಹೇಳಿದರು.