ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಹಾಸನದ ಎರಡು ಕಡೆ ದಾಳಿ ನಡೆಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೊಟೇಲ್, ಬಾರ್ ಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಶ್ರೀಕೃಷ್ಣ ಹೊಟೇಲ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.