ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಬಾರೀ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಹಗರಣದ (Bitcoin Scam) ಕುರಿತಾಗಿ ತನಿಖೆ ನಡೆಸಿದ್ದ ಅಧಿಕಾರಿಗಳ ಮನೆ ಮೇಲೆಯೇ ಇಂದು ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.
ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ನೇತೃತ್ವದಲ್ಲಿ 7 ಕಡೆ ಸಿಐಡಿ ಎಸ್‌ಐಟಿ ದಾಳಿ ನಡೆದಿದೆ. ಈ ಮೂಲಕ ಬಿಟ್ ಕಾಯಿನ್ ಹಗರಣದ ತನಿಖೆ ನಡೆಸಿದ್ದ ಪೊಲೀಸರಿಗೆ ನಡುಕ ಶುರುವಾಗಿದೆ.
ಬೊಮ್ಮನಹಳ್ಳಿಯಲ್ಲಿದ್ದ ಇನ್ಸ್‌ಪೆಕ್ಟರ್ ಸಂತೋಷ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಎಸ್‌ಐಟಿ ಶೋಧ ನಡೆಸಿದೆ. ಒಟ್ಟು ಐವರು ಅಧಿಕಾರಿಗಳ ನಿವಾಸ ಸೇರಿ ಏಳು ಕಡೆಗಳಿಗೆ ದಾಳಿ ನಡೆದಿದೆ.