ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಖ್ಯಾತ ಸಿತಾರ್ ವಾದಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಂಡಿತ್ ದೇವವ್ರತ್ ಚೌಧರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ದೇವ್ ಬ್ರತ್ ಅವರು ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರ ಪುತ್ರ ಪ್ರತೀಕ್ ಚೌಧರಿ, ನನ್ನ ತಂದೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಅವರು ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ, ಆದರೆ ನನ್ನ ಪ್ರಾರ್ಥನೆ ದೇವರಿಗೆ ತಲುಪಿಲ್ಲ. ಅವರು ನಮ್ಮನೆಲ್ಲಾ ಅಗಲಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಚೌಧುರಿ ಅವರು 1935 ರಲ್ಲಿ ಮೈಮೆನ್ಸಿಂಗ್ನಲ್ಲಿ (ಬಾಂಗ್ಲಾದೇಶ) ಜನಿಸಿದರು. ಭಾರತದ ಹೆಚ್ಚಿನ ಶಾಸ್ತ್ರೀಯ ಸಂಗೀತದ ಅಭ್ಯಾಸವನ್ನು ನಾಲ್ಕನೇ ವಯಸ್ಸಿನಿಂದಲ್ಲೇ ಆರಂಭಿಸಿದರು. ಅವರು ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.