ಮುಡಾ ಅಕ್ರಮ | ಬಾಗಿನಕ್ಕೆ ಬಾಮೈದ ನನ್ನ ಹೆಂಡತಿಗೆ ಸೈಟ್‌ ಗಿಫ್ಟ್‌ ಮಾಡಿದಾನೆ: ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ  ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಇದು ಬಿಜೆಪಿಯವರ ಕಾಲದಲ್ಲಿ ಆಗಿದ್ದು. 1 ಎಕರೆ 15 ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ. ಈ ಜಮೀನನ್ನು ಬಾಮೈದ ತೆಗೆದುಕೊಂಡು ಅರಿಶಿನ-ಕುಂಕಮ ರೀತಿಯಲ್ಲಿ ಉಡುಗೊರೆಯಾಗಿ ನನ್ನ ಪತ್ನಿಗೆ ಕೊಟ್ಟಿದ್ದಾನೆ. ನಾನು ಅಧಿಕಾರದಲ್ಲಿದ್ದಾಗ ಜಮೀನು ಖರೀದಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ 50:50 ಜಮೀನು ಅನುಪಾತದಲ್ಲಿ ಜಮೀನು ಕೊಡುವುದಾಗಿ ಮುಡಾ ಹೇಳಿದೆ. ಆದರೆ ಮುಡಾದವರು ಜಮೀನನ್ನು ಸೈಟ್ ಮಾಡಿ ಹಂಚಿಬಿಟ್ಟರು. ಹಂಚಿದ ಮೇಲೆ ನಮಗೆ ಜಮೀನು ಇಲ್ಲದೆ ಹಾಗೆ ಆಯ್ತು. ಅದಕ್ಕೆ ಮುಡಾದವರು ನಿಮಗೆ 50:50 ಅನುಪಾತದಲ್ಲಿ ಜಮೀನು ಕೊಡುತ್ತೇವೆ ಅಂದರು. ಅದಕ್ಕೆ ಬೇರೆ ಕಡೆ ಜಮೀನು ಕೊಟ್ಟರು, ಇದು ತಪ್ಪಾ? ಕಾನೂನಿನ ಪ್ರಕಾರವೇ ನಮಗೆ ಜಮೀನು ಹಂಚಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!