ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ಧಾರ್ಥ್ ವಿಹಾರ ಟ್ರಸ್ಟಿಗೆ ನೀಡಿದ ಭೂಮಿಯನ್ನು ವಾಪಸ್ ನೀಡಲು ತೀರ್ಮಾನಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿಯನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂದು ಆರೋಪವಿತ್ತು. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ಇದರಿಂದ ಕುಟುಂಬದ ಸದಸ್ಯರಿಗೆ ಹಿಂಸೆಯಾಗುತ್ತಿದೆ ಎಂದು ನೊಂದಿದ್ದಾರೆ.
ಹೀಗಾಗಿ ಸೆಪ್ಟೆಂಬರ್ 20ರಂದು ರಾಹುಲ್ ಕೆಐಎಡಿಬಿಗೆ ಪತ್ರ ಬರೆದಿದ್ದಾರೆ. ಕಾನೂನಾತ್ಮಕವಾಗಿ ಸೈಟು ವಾಪಸ್ ಕೊಡುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಸಂಪೂರ್ಣ ದಾಖಲೆಯ ಆಧಾರದ ಮೇಲೆ ಕೆಐಎಡಿಬಿ ನಿವೇಶನ ಸಿಕ್ಕಿತ್ತು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.