ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಶಿವರಾಜ್‌ಕುಮಾರ್ ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ. ತಮಗೆ ಅನಾರೋಗ್ಯ ಆಗಿರೋದು ಹೌದು ಎಂದಿರುವ ಅವರು, ಶಸ್ತ್ರಚಿಕಿತ್ಸೆಗಾಗಿ ಅಮೆರಿಕ ತೆರಳೋದಾಗಿ ಹೇಳಿದ್ದಾರೆ.
‘ನನಗೆ ಅನಾರೋಗ್ಯ ಇದೆ. ನಾನು ಸುಳ್ಳು ಹೇಳಲ್ಲ. ನನೂ ಮನುಷ್ಯನೇ. ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಿದ್ದೇನೆ’ ಎಂದಿದ್ದಾರೆ ಅವರು. ‘ಟ್ರೀಟ್ಮೆಂಟ್ಗೆ ನಾಲ್ಕು ಸೆಷನ್ ಇದೆ. ಈಗಾಗಲೇ ಎರಡು ಸೆಷನ್ ಆಗಿದೆ. ಇನ್ನೆರಡು ಸೆಷನ್ ಮಾಡಬೇಕಿದೆ. ಒಂದು ಸರ್ಜರಿ ನಡೆಯಬೇಕಿದೆ. ಅಮೆರಿಕದಲ್ಲಿ ಮಾಡೋದಾ ಅಥವಾ ಇಲ್ಲಿ ಮಾಡೋದಾ ಎನ್ನುವ ಬಗ್ಗೆ ಯೋಚನೆ ನಡೆಯುತ್ತಿದೆ. ಅಮೆರಿಕದಲ್ಲಿ ಮಾಡೋದು ಎಂದಾದರೆ ಒಂದು ತಿಂಗಳು ನಾನು ಅಲ್ಲಿಗೆ ಹೋಗಬೇಕಾಗುತ್ತದೆ ಎಂದಿದ್ದಾರೆ.