ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇವರ ದರುಶನ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ನದಿಗೆ ಬಿದ್ದ ಪರಿಣಾಮ ಆರು ಮಂದಿ ಆದಿ ಕೈಲಾಸ ಯಾತ್ರಿಕರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡ್ ಪಿಥೋರ್ಗಢ ಜಿಲ್ಲೆಯ ಆದಿ ಕೈಲಾಸ ದರ್ಶನ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಲಖನ್ಪುರ ಬಳಿ ಕಾಳಿ ನದಿಗೆ ಕಾರು ಬಿದ್ದು ಮಂಗಳವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ ಎಂದು ಪಿಥೋರ್ಗಢ್ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲೋಕೇಶ್ವರ್ ಸಿಂಗ್ ಹೇಳಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಬೆಂಗಳೂರು, ಇಬ್ಬರು ತೆಲಂಗಾಣ ಮತ್ತು ಇಬ್ಬರು ಉತ್ತರಾಖಂಡ ಮೂಲದವರಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಥಾಮಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ತಡರಾತ್ರಿಯಾದ್ದರಿಂದ ನದಿಯಿಂದ ಮೃತದೇಹಗಳ ಹೊರತೆಗೆಯುವ ಕಾರ್ಯ ಬುಧವಾರ ಬೆಳಗ್ಗೆ ಆರಂಭವಾಗಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.