ಪ್ರತಿ ಕಾರಿನಲ್ಲಿ ಆರು ಏರ್‌ಬ್ಯಾಗ್‌ ಕಡ್ಡಾಯ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇನ್ಮುಂದೆ ಪ್ರತಿ ಕಾರಿನಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಒದಗಿಸುವಂತೆ ಆಟೋಮೊಬೈಲ್ ತಯಾರಕರನ್ನು ಕೇಳಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.

ಪ್ರತಿ ಏರ್‌ಬ್ಯಾಗ್‌ಗೆ ಕೇವಲ 800 ರೂ.ಗಳ ಬೆಲೆ ಇರುವುದರಿಂದ, ಕಾರುಗಳಲ್ಲಿ ಸುಧಾರಿತ ಸುರಕ್ಷತಾ ವೈಶಿಷ್ಟ್ಯವಾಗಿ ಹೆಚ್ಚಿನ ಏರ್‌ಬ್ಯಾಗ್‌ಗಳನ್ನು ಒದಗಿಸುವಂತೆ ಆಟೋಮೊಬೈಲ್ ತಯಾರಕರನ್ನ ಕೇಳಲು ಸರ್ಕಾರ ನಿರ್ಧರಿಸಿದೆ ಎಂದು ಸಂಸತ್ತಿಗೆ ಗಡ್ಕರಿ ಮಾಹಿತಿ ನೀಡಿದರು.

ಪ್ರಸ್ತುತ, ಪ್ರತಿ ಕಾರಿನಲ್ಲಿ ಕೇವಲ ಎರಡು ಏರ್‌ಬ್ಯಾಗ್‌ಗಳನ್ನು ಮಾತ್ರ ಕಡ್ಡಾಯಗೊಳಿಸಲಾಗಿದೆ. ಆದರೆ ಹಿಂದಿನ ಆಸನಗಳಲ್ಲಿ ಕುಳಿತುಕೊಳ್ಳುವ ಪ್ರಯಾಣಿಕರ ಸುರಕ್ಷತೆಗಾಗಿ ಸರ್ಕಾರವು ಇನ್ನೂ ನಾಲ್ಕು ಪ್ರಸ್ತಾಪ ಮಾಡಿದೆ. ಶೀಘ್ರದಲ್ಲೇ ಈ ಬಗ್ಗೆ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಗಡ್ಕರಿ ರಾಜ್ಯಸಭೆಯಲ್ಲಿ ತಿಳಿಸಿದರು.

ಭಾರತದಲ್ಲಿ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಕ್ಕೆ ಬಲಿಯಾಗ್ತಿದ್ದು,ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಅದರ ಪರಿಣಾಮವಾಗಿ ಸಂಭವಿಸುವ ಸಾವುಗಳನ್ನ 2024ರ ವೇಳೆಗೆ ಅರ್ಧದಷ್ಟು ಕಡಿಮೆ ಮಾಡುವ ಗುರಿ ನಿಗದಿಪಡಿಸಲಾಗಿದೆ. ಈ ಮೂಲಕ ಈ ಕಪ್ಪು ಚುಕ್ಕೆಗಳನ್ನು ತೆಗೆದುಹಾಕಲಾಗುತ್ತಿದೆ ಎಂದು ಗಡ್ಕರಿ ಮಾಹಿತಿ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!