ಭೀಕರ ಅಪಘಾತ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಐವರು ಪೊಲೀಸರು ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ನಿಂತಿದ್ದ ಟ್ರಕ್‌ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಸುಜನ್‌ಗಢ್ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಚುನಾವಣಾ ಕರ್ತವ್ಯಕ್ಕೆ ತಾರಾನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಐವರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಖಿನ್ವಸರ್ ಪೊಲೀಸ್ ಠಾಣೆಯ ಎಎಸ್‌ಐ ರಾಮಚಂದ್ರ, ಕಾನ್‌ಸ್ಟೆಬಲ್‌ಗಳಾದ ಕುಂಭರಾಮ್, ಸುರೇಶ್ ಮೀನಾ, ಥನರಾಮ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದು, ‘ಇಂದು ಮುಂಜಾನೆ, ಚುರುವಿನ ಸುಜನ್‌ಗಢ್ ಸದರ್ ಪ್ರದೇಶದಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಪೊಲೀಸರ ಸಾವು-ನೋವುಗಳ ಬಗ್ಗೆ ದುಃಖದ ಸುದ್ದಿ ಬಂದಿದೆ. ಈ ಅಪಘಾತದಲ್ಲಿ ಮೃತಪಟ್ಟ ಎಲ್ಲಾ ಪೊಲೀಸರ ಕುಟುಂಬಗಳಿಗೆ ನಮ್ಮ ತೀವ್ರ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!