ಫರಿದಾಬಾದ್‌ನಲ್ಲಿ ಭೀಕರ ರಸ್ತೆ ಅಪಘಾತ : ಆರು ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಫರಿದಾಬಾದ್-ಗುರುಗ್ರಾಮ್ ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಂಗರ್ ಪೊಲೀಸ್ ಪೋಸ್ಟ್ ಬಳಿ ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಮೃತರು ಮಾರುತಿ ಆಲ್ಟೊ ಕಾರಿನಲ್ಲಿ ಗುರುಗ್ರಾಮದಿಂದ ಫರಿದಾಬಾದ್‌ಗೆ ಬರುತ್ತಿದ್ದ ಪಲ್ವಾಲ್ ನಿವಾಸಿಗಳಾಗಿದ್ದು, ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿರವು 18 ರಿಂದ 25 ವರ್ಷ ವಯಸ್ಸಿನ ಪುತಿನ್, ಜತಿನ್, ಆಕಾಶ್, ಸಂದೀಪ್, ಬಲ್ಜಿತ್ ಮತ್ತು ವಿಶಾಲ್ ಎಂದು ಗುರುತಿಸಲಾಗಿದೆ.

ಪೊಲೀಸರು ಡಂಪರ್ ಅನ್ನು ವಶಪಡಿಸಿಕೊಂಡಿದ್ದಾರೆ ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!