ಕನ್ವರ್ ಯಾತ್ರಾರ್ಥಿಗಳ ಮೇಲೆ ಕೊಳಕು ನೀರು ಎರಚಿದ 6‌ ಮಂದಿ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬರೇಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಕನ್ವರ್ ಯಾತ್ರಿಕರ ಮೇಲೆ ಕೊಳಕು ನೀರು ಎಸೆದ ಆರೋಪದ ಮೇಲೆ 6 ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಕಂಟೋನ್ಮೆಂಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನ್ವರ್ ಯಾತ್ರಿಕರು ಡಿಜೆ ಸಂಗೀತ ನುಡಿಸುವ ಬಗ್ಗೆ ವಿವಾದ ಭುಗಿಲೆದ್ದಿದೆ. ಅನ್ಯ ಸಮುದಾಯದ ಜನರು ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ಕನ್ವಾರಿಯಾಗಳ ಮೇಲೆ ಕೊಳಕು ನೀರನ್ನು ಸುರಿದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿ ಯಾತ್ರಾರ್ಥಿಗಳು ಪ್ರತಿಭಟನೆ ನಡೆಸಿದರು.
ಶುಕ್ರವಾರ ಕನ್ವರ್‌ಗಳ ದಂಡು ಪರ್ಗವ ಗ್ರಾಮದ ಮೂಲಕ ಹಾದು ಹೋಗುತ್ತಿದ್ದಾಗ ಡಿಜೆ ಮ್ಯೂಸಿಕ್ ನುಡಿಸುವ ವಿವಾದ ಉಂಟಾಗಿದೆ. ಈವೇಳೆ ಅನ್ಯ ಸಮುದಾಯದ ವ್ಯಕ್ತಿಗಳು ಕನ್ವರ್ ಯಾತ್ರಿಕರ ಮೇಲೆ ಕೊಳಕು ನೀರನ್ನು ಸುರಿದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರವೀಂದ್ರ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಕೆ ಸಿಂಗ್ ಹೇಳಿದ್ದಾರೆ. ಕನ್ವರ್ ಯಾತ್ರಾರ್ಥಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಅವರನ್ನು ತಡೆಯಲು ಯತ್ನಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!