ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅಸ್ಸಾಂನ ಕಮ್ರೂಪ್ ಜಿಲ್ಲೆಯ ಛಾಯಗಾಂವ್ ಪ್ರದೇಶದಲ್ಲಿ ಬುಧವಾರ ಸಂಭವಿಸಿದ ಭಾರೀ ಅಗ್ನಿ ದುರಂದಲ್ಲಿ ಕನಿಷ್ಠ ಆರು ಮನೆಗಳು ಸುಟ್ಟು ಭಸ್ಮಗೊಂಡಿವೆ.
ವರದಿಗಳ ಪ್ರಕಾರ, ಛಾಯಗಾಂವ್ ಮೆರ್ಗಂಡಾ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ, ತದನಂತರ ಹತ್ತಿರದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಗಳು ಸುಟ್ಟು ಭಸ್ಮವಾಗಿವೆ.
“ಮೊದಲು ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹತ್ತಿರದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯಲ್ಲಿ ಆರು ಮನೆಗಳು ಸುಟ್ಟು ಭಸ್ಮವಾಗಿವೆ” ಎಂದು ಸ್ಥಳೀಯ ಯುವಕರು ತಿಳಿಸಿದ್ದಾರೆ.
ನಂತರ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ.
ಸ್ಥಳೀಯ ಪೊಲೀಸರ ಪ್ರಕಾರ, ಬೆಂಕಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ.