ಮನೆ ಗೋಡೆ ಕುಸಿತ: ಇಬ್ಬರು ಮಕ್ಕಳು ಸೇರಿ 6 ಮಂದಿ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮನೆ ಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಉತ್ತರ ಪ್ರದೇಶದ ಮೌ ಎಂಬಲ್ಲಿ ನಡೆದಿದೆ.

ಮೌ ಎಂಬಲ್ಲಿನ ಘೋಸಿ ಪ್ರದೇಶದಲ್ಲಿ ವಿವಾಹ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಮನೆ ಗೋಡೆ ಕುಸಿದು, ಮನೆಯೊಳಗಿದ್ದ ಆರು ಮಂದಿ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಪೊಲೀಸ್‌ ಅಧಿಕಾರಿಗಳು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅವಶೇಷಗಳನ್ನು ತೆರವುಗೊಳಿಸಲಾಗಿದ್ದು, ಮನೆಯೊಳಗೆ ಸಿಲುಕಿದ್ದವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!