Wednesday, October 5, 2022

Latest Posts

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 6 ಆರೋಪಿಗಳು ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್
17 ವರ್ಷದ ಬಾಲಕಿಯ ಮೇಲೆ ಐವರು ಪುರುಷರು ಮತ್ತು ಓರ್ವ ಅಪ್ರಾಪ್ತ ಬಾಲಕ ಸೇರಿ ಹಲವು ಬಾರಿ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಗಳಲ್ಲಿ ಒಬ್ಬಾತ ಬಾಲಕಿಯನ್ನು ಗ್ರಾಮದ ಜಮೀನೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಆ ಬಳಿಕ ಉಳಿದ ಐವರು ಆರೋಪಿಗಳು ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಎಲ್ಲಾ ಆರೋಪಿಗಳು 19 ರಿಂದ 33 ವರ್ಷ ವಯೋಮಾನದವರಾಗಿದ್ದಾರೆ. ಘಟನೆ ಬಗ್ಗೆ ಹುಡುಗಿಯ ಪೊಷಕರಿಗೆ ಮಾಹಿತಿ ಸಿಕ್ಕಿ ಸ್ಥಳೀಯ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತಕ್ಷಣವೇ ಬಾಲಪಾರಾಧಿ ಸೇರಿದಂತೆ 6 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.
ಬಂಧಿತ ಐವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿಗಿದೆ. ಮತ್ತು ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!