ಅಕ್ರಮ ಗಡಿ ಪ್ರವೇಶ ಆರೋಪ: ಅಮೆರಿಕಾದಲ್ಲಿ ಆರು ಭಾರತೀಯರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ ಆರು ಭಾರತೀಯರು ಸೇರಿದಂತೆ ಏಳು ಮಂದಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ತಿಂಗಳು 28ರಂದು ಅಮೆರಿಕ-ಕೆನಡಾ ಗಡಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಆರು ಭಾರತೀಯರ ಜೊತೆಗೆ ಒಬ್ಬ ಅಮೆರಿಕನ್ ಪ್ರಜೆ ಸೇರಿದಂತೆ ಒಟ್ಟು ಏಳು ಜನ ಸೇಂಟ್ ರೆಜಿಸ್ ನದಿ ಮೂಲಕ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪ್ರಯಾಣಿಕರ ದೋಣಿ ಅಪಾಯಕ್ಕೆ ಸಿಲುಕಿದೆ. ಅನುಮಾನಾಸ್ಪದವಾಗಿ ನಡೆಯುತ್ತಿರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮುಳಗುತ್ತಿದ್ದ ದೋಣಿಯಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

ಏಳು ಮಂದಿಗೂ ಚಿಕಿತ್ಸೆ ಕೊಡಿಸಿದ ಬಳಿಕ ಬಂಧಿಸಿದ್ದಾರೆ. ಅಕ್ರಮವಾಗಿ ದೇಶ ಪ್ರವೇಶಿಸಿದ ಆರೋಪದ ಮೇಲೆ ಇವರೆಲ್ಲರನ್ನು ಬಂಧಿಸಲಾಗಿದ್ದು, ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!