April 13, 2026
Monday, April 13, 2026
spot_img

ಮಧ್ಯಪ್ರಾಚ್ಯ ಸಂಘರ್ಷಕ್ಕೆ ಆರು ಭಾರತೀಯರು ಸಾವು: ವಿದೇಶಾಂಗ ಸಚಿವಾಲಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್ ಮೇಲೆ ಅಮೇರಿಕ, ಇಸ್ರೇಲ್ ದಾಳಿ ಹಾಗೂ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿಕೊಂಡು ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ನಡೆಸಿದ ದಾಳಿಯಿಂದಾಗಿ ಒಟ್ಟು ಆರು ಭಾರತೀಯರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈಗಾಗಲೇ ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕಾರ್ಯ ನಡೆಯುತ್ತಿದ್ದು, ಈ ಕುರಿತು ಅಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಮಾತುಕತೆ ನಡೆಯುತ್ತಿದೆ ಎಂದು ಹೆಚ್ಚುವರಿ ಕಾರ್ಯದರ್ಶಿ(ಗಲ್ಫ್) ಅಸೀಮ್ ಆರ್. ಮಹಾಜನ್ ಅವರು ಹೇಳಿದ್ದಾರೆ.

ಮಾರ್ಚ್ 18 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಓರ್ವ ಭಾರತೀಯ ಪ್ರಜೆ ಸಾವನ್ನಪ್ಪಿದ್ದಾರೆ . ಅವರ ಸಾವಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೃತರ ಕುಟುಂಬ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದರು.

ಇನ್ನು ಕಾಣೆಯಾದ ಭಾರತೀಯ ಪ್ರಜೆಯ ಹುಡುಕಾಟ ನಡೆಯುತ್ತಿದ್ದು, ಸೌದಿ ಅರೇಬಿಯಾ, ಓಮನ್, ಇರಾಕ್ ಮತ್ತು ಯುಎಇ ದೇಶಗಳಲ್ಲಿ ಹುಡುಕಾಟ ನಡೆಯುತ್ತಿದೆ . ಇದರ ಜೊತೆಗೆ ಮೃತಪಟ್ಟ ಭಾರತೀಯ ಪ್ರಜೆಗಳ ಮೃತದೇಹಗಳನ್ನು ಭಾರತಕ್ಕೆ ಕಳುಹಿಸುವ ಕುರಿತು ಅಧಿಕಾರಿಗಳ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಮಹಾಜನ್ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !