ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮೀನು ವಿಚಾರವಾಗಿ ಎರಡು ಕುಟುಂಬಗಳ ನಡುವೆ ಉಂಟಾದ ಜಗಳದಲ್ಲಿ ಆರು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.
ರಾಮಶಿಶ್ ಯಾದವ್ ಮತ್ತು ಶಶಿಭೂಷಣ್ ಚೌಹಾಣ್ ಅವರ ಜಮೀನಿನ ಸುತ್ತ ಬೇಲಿ ಹಾಕುವ ವಿಚಾರಕ್ಕೆ ಜಗಳ ನಡೆದಿದೆ. ಚೌಹಾಣ್ ಹೇಳಿಕೆಯಂತೆ ರಾಮಶಿಶ್ ತನ್ನ ಜಮೀನಿನ ಕೆಲವು ಭಾಗವನ್ನು ಅತಿಕ್ರಮಿಸಿಕೊಂಡಿರುವುದಾಗಿ ಆರೋಪಿಸಿದ್ದಾರೆ.
ಇದೆ ವಿಚಾರವಾಗಿ ರಾಮಶಿಶ್ ಹಾಗೂ ಚೌಹಾಣ್ ಕುಟುಂಬದ ನಡುವೆ ಗಲಾಟೆ ನಡೆದು ಎರಡೂ ಕುಟುಂಬ ಸದಸ್ಯರು ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆ. ಅಲ್ಲದೆ ಪಕ್ಕದಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಇದರ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎರಡೂ ಕುಟುಂಬಗಳ ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ. ಹತ್ಯೆಗೆ ಸಂಬಂಧಿಸಿದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸ್ ಆಯುಕ್ತ ಹಾಗೂ ಐಜಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶಿಸಿದ್ದಾರೆ.