March 23, 2026
Monday, March 23, 2026
spot_img

SHOCKING | ಬಾತ್‌ರೂಮ್‌ ಹೋಗೋಕೆ ಬಸ್‌ನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್, ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆ ಮತ್ತು ನಿಯಮ ಉಲ್ಲಂಘನೆಯ ಪರಿಣಾಮವಾಗಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಾತ್‌ರೂಮ್‌ ಹೋಗೋಕೆ ಬಸ್‌ನಿಂದ ಇಳಿದ ಪ್ರಯಾಣಿಕರ ಮೇಲೆ ಕಂಟೇನರ್ ಹರಿದಿದ್ದು, ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುರಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲ್‌ಸ್ಟೋನ್ 88 ಬಳಿ ಈ ದುರಂತ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ ಸುಮಾರು 2:45 ರ ಸುಮಾರಿಗೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುತ್ತಿತ್ತು. ಪ್ರಯಾಣದ ಮಧ್ಯೆ ಪ್ರಯಾಣಿಕರು ಶೌಚಾಲಯ ಬಳಸಲು ಬಸ್ ನಿಲ್ಲಿಸಲಾಗಿದೆ.

ಇನ್ನು ಚಾಲಕ ಹಸಿರು ವಲಯದಲ್ಲಿ ಬಸ್ ನಿಲ್ಲಿಸುವ ಬದಲು ರಸ್ತೆಯಲ್ಲೇ ನಿಲ್ಲಿಸಿದ್ದ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಂಟೇನರ್ ಬಸ್‌ಗೆ ಡಿಕ್ಕಿ ಹೊಡೆದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಹರಿದಿದೆ.

ಡಿಕ್ಕಿ ಎಷ್ಟು ಭೀಕರವಾಗಿತ್ತೆಂದರೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !