ಕಾರು-ಲಾರಿ ಅಪಘಾತದಲ್ಲಿ ಆರು ಮಂದಿ ಸಾವು: ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ ಕುಷ್ಟಗಿ:

ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದೆ. ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು.

ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!