ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿಗೆ ಕಾರು ಢಿಕ್ಕಿಯಾದ ಪರಿಣಾಮ ಕನಿಷ್ಠ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಸಂಗಮ್ ಮಂಡಲದ ಪೆರಾಮನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ.
ಮೂಲಗಳ ಪ್ರಕಾರ ವೇಗವಾಗಿ ಬಂದ ಮರಳು ಟಿಪ್ಪರ್ ಲಾರಿ ರಾಂಗ್ ರೂಟ್ ನಲ್ಲಿ ಬಂದು ಎದುರಿಗೆ ಬಂದ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟಿಪ್ಪರ್ ಕಾರಿಗೆ ಡಿಕ್ಕಿ ಹೊಡೆದು ನಂತರ ಕಾರನ್ನು ಸ್ವಲ್ಪ ದೂರದವರೆಗೆ ಎಳೆದುಕೊಂಡು ಹೋಗಿದೆ. ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೃತರಲ್ಲಿ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.