ಕಲುಷಿತ ನೀರು ಸೇವಿಸಿ ದುರಂತ: 5 ಲಕ್ಷ ರೂ ಪರಿಹಾರ ನೀಡುವಂತೆ ಸಚಿವ ಆರ್​ಬಿ ತಿಮ್ಮಾಪುರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಜುಲೈ 31ರಂದು ಕಲುಷಿತ ನೀರು(Contaminated water)ಸೇವಿಸಿ ಆರು ಜನರು ಸಾವನ್ನಪ್ಪಿದ್ದು,ಸುಮಾರು ನೂರು ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು.

ಇಂದು 5 ಲಕ್ಷ ರೂ. ಪರಿಹಾರದ ಚೆಕ್‌ ನೀಡುವಂತೆ ಡಿಸಿಗೆ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ (RB Timmapur) ಸೂಚನೆ ನೀಡಿದ್ದಾರೆ. ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ. ವೈಯಕ್ತಿಕ ಸಹಾಯ ಮಾಡಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ, ಅನುಮಾನವಿದ್ದರೆ ಮತ್ತೆ ತನಿಖೆ ಮಾಡುತ್ತೇವೆ. ಬೇಕಾದರೆ ಮತ್ತೊಮ್ಮೆ ತನಿಖೆ ಮಾಡಿಸೋಣ. ಲ್ಯಾಬ್ ವರದಿ ವೀಕ್ಷಿಸಿದ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!