Sunday, March 7, 2021

Latest Posts

ಆರು ಮಂದಿ ಮೃತಪಟ್ಟಿರುವುದು ಜಿಲೆಟಿನ್ ಸ್ಪೋಟದಿಂದಲ್ಲ, ಸಿಎಂ ದುರಾಡಳಿತದಿಂದ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಚಿಕ್ಕಬಳ್ಳಾಪುರದ  ಜಿಲೆಟಿನ್ ಸ್ಫೋಟದಲ್ಲಿ ಮೃತ ಪಟ್ಟ ಆರು ಮಂದಿ ಕಾರ್ಮಿಕರ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅಮಾಯಕ ಕಾರ್ಮಿಕರ ದುರ್ಮರಣಕ್ಕೆ ಕಾರಣವಾದ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಪೋಟ ಆಘಾತಕಾರಿ ದುರ್ಘಟನೆ. ಮೃತರ ಆತ್ಮಕ್ಕೆ ಶಾಂತಿ ಕೋರುವೆ. ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ನೊಂದ ಕುಟುಂಬಗಳಿಗೆ ತಕ್ಷಣ ಪರಿಹಾರ ಘೋಷಿಸಬೇಕೆಂದು ಸಿಎಂ ಅವರನ್ನು ಒತ್ತಾಯಿಸುವೆ ಎಂದಿದ್ದಾರೆ. 

ಶಿವಮೊಗ್ಗದ ಜಿಲೆಟಿನ್ ಸ್ಪೋಟದ ತಿಂಗಳ ಅವಧಿಯಲ್ಲಿ ನಡೆದ ಚಿಕ್ಕಬಳ್ಳಾಪುರ ಸ್ಪೋಟ ರಾಜ್ಯ ಸರ್ಕಾರದ ನಿಷ್ಕ್ರಿಯತೆ, ಬೇಜವಾಬ್ದಾರಿತನ ಮತ್ತು ಅಕ್ರಮದಲ್ಲಿ ಷಾಮೀಲಾಗಿರುವ ಭ್ರಷ್ಟತನಕ್ಕೆ ಸಾಕ್ಷಿ. ಯಡಿಯೂರಪ್ಪ ಅವರೇ ನೀವು ಯಾರನ್ನು ರಕ್ಷಿಸುತ್ತಿದ್ದೀರಿ? ಜನರನ್ನೇ? ಭ್ರಷ್ಟರನ್ನೇ ಎಂದು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ

ಚಿಕ್ಕಬಳ್ಳಾಪುರ ಕಲ್ಲು ಕ್ವಾರಿಯಲ್ಲಿ ಆರು‌ಮಂದಿ ಸಾವಿಗೀಡಾಗಿರುವುದು ಜಿಲೆಟಿನ್ ಸ್ಪೋಟದಿಂದ ಅಲ್ಲ. ಈ ಅಮಾಯಕ ಕಾರ್ಮಿಕರು, ಅಕ್ರಮ ಗಣಿಗಳನ್ನು ಸಕ್ರಮ ಮಾಡಲು ಹೊರಟಿರುವ ಯಡಿಯೂರಪ್ಪ ಅವರ ದುರಾಡಳಿತಕ್ಕೆ ಬಲಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss