ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾದ ಕ್ವೀನ್ಸ್ಲ್ಯಾಂಡ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಯ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಅದರ ಭಾಗವಾಗಿ, ಪೊಲೀಸರು ವಿಂಬಿಲ್ಲಾ ಪ್ರದೇಶಕ್ಕೆ ತೆರಳಿದರು.
ಬಂದೂಕುಧಾರಿಗಳು ಪೊಲೀಸರ ಮೇಲೆ ಮಿಂಚಿನ ದಾಳಿ ನಡೆಸಿ ಬಂದೂಕುಗಳಿಂದ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.